ರಾಘವೇಂದ್ರ ರಾಘವೇಂದ್ರ (1981) - ಗುರುವಾರ ಬಂತಮ್ಮ
ಗುರುವಾರ ಬಂತಮ್ಮ | ಚಿ. ಉದಯಶಂಕರ್ | ಭಕ್ತಿಗೀತೆ | ೧೯೮೧
ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ಋತಾಯಚ
ಭಜತಾಂ ಕಲ್ಪವ್ರುಕ್ಶಾಯ ನಮತಾಂ ಕಾಮಧೇನವೆ....ನಮತಾಮ್ ಕಾಮಧೇನವೆ....
ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ
ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ
-----------------೧-------------------------
ತಂದೆ ತಾಯಿ ಬಂಧು ಬಳಗ ಎಲ್ಲ ನೀನೆ ಎನ್ನಿರಿ
ನಾನು ಎಂಬ ಮೋಹ ಮರೆತು ಎಂದು ಅವನ ನಂಬಿರಿ
ತಂದೆ ತಾಯಿ ಬಂಧು ಬಳಗ ಎಲ್ಲ ನೀನೆ ಎನ್ನಿರಿ
ನಾನು ಎಂಬ ಮೋಹ ಮರೆತು ಎಂದು ಅವನ ನಂಬಿರಿ
ಹೇಗೆ ಇರಲಿ ಎಲ್ಲೆ ಇರಲಿ...ಅವನ ಸ್ಮರಣೆ ಮಾಡಿರಿ
ಧ್ಯಾನದಿಂದ ಮನವ ಸುಡುವ ಚಿಂತೆ ದೂರ ಮಾಡಿರಿ
ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ
*ಕೋರಸ್*
-----------------೨--------------------------
ಮಾನ ಪ್ರಾಣ ಧನವು ಎಲ್ಲ ಸ್ವಾಮಿ ನಿನ್ನದೆನ್ನಿರಿ
ಗುರುವೆ ನಿನ್ನ ಕರುಣೆಯೊಂದೆ ಸಾಕು ನನಗೆ ಎನ್ನಿರಿ
ಮಾನ ಪ್ರಾಣ ಧನವು ಎಲ್ಲ ಸ್ವಾಮಿ ನಿನ್ನದೆನ್ನಿರಿ
ಗುರುವೆ ನಿನ್ನ ಕರುಣೆಯೊಂದೆ ಸಾಕು ನನಗೆ ಎನ್ನಿರಿ
ಕಲ್ಲು ಮುಳ್ಳೊ ಸಿಡಿಲೊ ಮಳೆಯೊ ಅವನ ಕರುಣೆಯೆನ್ನಿರಿ
ಏನೆ ಬರಲಿ ಅವನದೆಂದು ನಂಬಿ ಮುಂದೆ ನಡೆಯಿರಿ
ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ
*ಕೋರಸ್*
-------------------೩-------------------------
ನಿಮ್ಮ ಮನೆಯ ನಿಮ್ಮ ಮನದ ವಿಶಯವೆಲ್ಲ ಬಲ್ಲನು
ಚಪಲದಿಂದ ಅಲೆವ ಮನದಲೆಂದು ಗುರುವು ನಿಲ್ಲನು
ನಿಮ್ಮ ಮನೆಯ ನಿಮ್ಮ ಮನದ ವಿಶಯವೆಲ್ಲ ಬಲ್ಲನು
ಚಪಲದಿಂದ ಅಲೆವ ಮನದಲೆಂದು ಗುರುವು ನಿಲ್ಲನು
ಕೊಡುವುದೆಲ್ಲ ಕೊಡುವನವನು ಇನ್ನು ಆಸೆಯೇತಕೆ
ಕಲ್ಪವೃಕ್ಷದಂತೆ ಗುರುವು ಇರಲು ಚಿಂತೆಯೇತಕೆ
ರಾಘವೇಂದ್ರ ರಾಘವೇಂದ್ರ ರಾಘವೇಂದ್ರನೆನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ
*ಕೋರಸ್*
ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ಋತಾಯಚ
ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೆ....ನಮತಾಮ್ ಕಾಮಧೇನವೆ....
No comments:
Post a Comment
Note: Only a member of this blog may post a comment.