Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Tuesday, January 17, 2012

ಅಸಂಭವ (1986) - ಯಾರಿಗೆ ಬಂತು? ಎಲ್ಲಿಗೆ ಬಂತು?

  Sandeep T Gowda       Tuesday, January 17, 2012
ಅಸಂಭವ | ಚಿತ್ರಗೀತೆ | ಚಿತ್ರಗೀತೆಯಲ್ಲಿ ಕವನ | ಪ್ರೊ. ಸಿದ್ದಲಿಂಗಯ್ಯ | ೧೯೮೬
ಸಾಹಿತ್ಯ : ಸಿದ್ಧಲಿಂಗಯ್ಯ
ಸಂಗೀತ : ಶಂಕರ್-ಗಣೇಶ್
ಗಾಯನ : ರಮೇಶ್

ಯಾರಿಗೆ ಬಂತು ಎಲ್ಲಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಟಾಟಾ ಬಿರ್ಲಾ ಜೋಬಿಗೆ ಬಂತು
ಜನಗಳ ತಿನ್ನುವ ಬಾಯಿಗೆ ಬಂತು

ಕೋಟ್ಯಾಧೀಶನ ಕೋಣೆಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ
ಬಡವನ ಮನೆಗೆ ಬರಲಿಲ್ಲ
ಬೆಳಕಿನ ಕಿರಣ ತರಲಿಲ್ಲ

ಗೋಳಿನ ಕಡಲನು ಬತ್ತಿಸಲಿಲ್ಲ
ಸಮತೆಯ ಹೂವನು ಅರಳಿಸಲಿಲ್ಲ
ಹಣವಂತರು ಕೈಸನ್ನೆ ಮಾಡಿದರೆ
ಕತ್ತಲೆಯಲ್ಲಿ ಬೆತ್ತಲೆಯಾಯಿತು
ಯಾರೂ ಕಾಣದ ಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ

ಸಾವಿರಾರು ಜನ ಗೋರಿಯಾದರು
ಲಕ್ಷ ಲಕ್ಷ ಜನ ಗಲ್ಲಿಗೇರಿದರು
ರೈತ ಕಾರ್ಮಿಕರು ರಕ್ತವ ಕೊಟ್ಟರು
ಯಾರಿಗೆ ಬಂತು ಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ

ಪೋಲೀಸರ ಬೂಟಿಗೆ ಬಂತು
ಮಾಲೀಕರ ಚಾಟಿಗೆ ಬಂತು
ಬಂದೂಕದ ಗುಂಡಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ

ಪಾರ್ಲಿಮೆಂಟಿನ ಕುರ್ಚಿಯ ಮೇಲೆ
ವರ್ಷಗಟ್ಟಲೆ ಚರ್ಚೆಗೆ ಕೂತು
ಬಡವರ ಬೆವರು ರಕ್ತವ ಕುಡಿದು
ಏಳಲೇಇಲ್ಲ ಸ್ವಾತಂತ್ರ್ಯ
ನಲವತ್ತೇಳರ ಸ್ವಾತಂತ್ರ್ಯ

ಯಾರಿಗೆ ಬಂತು ಎಲ್ಲಿಗೆ ಬಂತು
ನಲವತ್ತೇಳರ ಸ್ವಾತಂತ್ರ್ಯ?
logoblog

Thanks for reading ಅಸಂಭವ (1986) - ಯಾರಿಗೆ ಬಂತು? ಎಲ್ಲಿಗೆ ಬಂತು?

Previous
« Prev Post

No comments:

Post a Comment

Note: Only a member of this blog may post a comment.