Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Tuesday, January 17, 2012

ಮೈಸೂರ ಮಲ್ಲಿಗೆ(1992) - ಹಕ್ಕಿಯ ಹಾಡಿಗೆ ತಲೆದೂಗುವ ಹೂವು

  Sandeep T Gowda       Tuesday, January 17, 2012
ಕವನ | ಕೆ.ಎಸ್. ನರಸಿಂಹಸ್ವಾಮಿ | ಚಿತ್ರಗೀತೆ | ಚಿತ್ರಗೀತೆಯಲ್ಲಿ ಕವನ | ಮೈಸೂರ ಮಲ್ಲಿಗೆ | ೧೯೯೨

ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ

ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ

ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನೆಡೆಯುವ ಆಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ
logoblog

Thanks for reading ಮೈಸೂರ ಮಲ್ಲಿಗೆ(1992) - ಹಕ್ಕಿಯ ಹಾಡಿಗೆ ತಲೆದೂಗುವ ಹೂವು

Previous
« Prev Post

No comments:

Post a Comment

Note: Only a member of this blog may post a comment.