ಚಿತ್ರಗೀತೆ | ಜಯಂತ ಕಾಯ್ಕಿಣಿ | ಮುಂಗಾರು ಮಳೆ | ೨೦೦೬
ಸಂಗೀತ: ಮನೋ ಮೂರ್ತಿ
ಹಾಡಿದವರು: ಸೋನು ನಿಗಮ್
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳೆಂದು
ಮಾಯದ ಲೋಕದಿಂದ..ನನಗಾಗೆ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೧-------------------------
ಸುರಿಯುವ ಸೋನೆಯು ಸೂಸಿದೆ..ನಿನ್ನದೆ ಪರಿಮಳ
ಇನ್ನು ಯಾರ ಕನಸಲೂ..ನೀನು ಹೋದರೆ ತಳಮಳ
ಪೂರ್ಣ ಚಂದಿರ ರಜ ಹಾಕಿದೆ..ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಪ್ಪಿ ನನ್ನ ಅಪ್ಪಿಕೊ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೨------------------------
ತುಟಿಗಳ ಹೂವಲಿ..ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ..ಕೇವಲ ನಿನ್ನದೆ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ..ಹೃದಯದಿ ನಾನೆ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳೆಂದು
ಮಾಯದ ಲೋಕದಿಂದ..ಬಂದವಳೆಂದು
ಆಹ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
No comments:
Post a Comment
Note: Only a member of this blog may post a comment.