ಚಿತ್ರ: ಅಮೃತ ವರ್ಷಿಣಿ
ಗಾಯಕ: ಎಸ್ ಪಿ ಬಾಲು
ನಟರು: ಸುಹಾಸಿನಿ, ರಮೇಶ್, ಶರತ್ ಬಾಬು
ಮನಸೇ ಈ ಬದುಕು ನಿನಗಾಗಿ ಬವಣೆ ನಿನಗಾಗಿ
ನನ್ನ ಪ್ರೀತಿಯೇ ಸುಳ್ಳಾದರೆ ಜಗವೆಲ್ಲ ಸುಳ್ಳು ಅಲ್ಲವೇ
ನಿನ್ನ ಒಂದು ಮಾತು ಸಾಕು ಮರುಮಾತು ಎಲ್ಲಿ
ನಿನ್ನ ಒಂದು ಆಣತಿ ಸಾಕು ನಾ ಅಡಿಗಳಲ್ಲಿ
ನಿನ್ನ ಒಂದು ಹೆಸರೇ ಸಾಕು ಉಸಿರಾಟಕಿಲ್ಲಿ
ನಿನ್ನ ಒಂದು ಸ್ಪರ್ಶ ಸಾಕು ಈ ಜನುಮದಲ್ಲಿ
ಮನಸೇ ನಾ ಏನೇ ಮಾಡಿದರು ನಿನ್ನ ಪ್ರೀತಿಗಲ್ಲವೇ
ಮನಸೇ ಮನಸ ಕ್ಷಮಿಸೆ......
ನನ್ನ ಪ್ರೀತಿ ಗಂಗೆ ನೀನು ಮುಡಿಸೇರಲೆಂದೇ
ಸಮಯಗಳ ಸರಪಳಿಯಲ್ಲಿ ಕೈ ಗೊಂಬೆಯಾದೆ
ನನ್ನ ಬಾಳ ಪುಟಕೆ ನೀನು ಹೊಸ ತಿರುವು ತಂದೆ
ನಿನ್ನ ಮರೆತು ಹೋದರೆ ಈಗ ಬದುಕೇಕೆ ಮುಂದೆ
ಮನಸೇ ನಾ ಏನೇ ಮಾಡಿದರು ನಿನ್ನ ಪ್ರೀತಿಗಲ್ಲವೇ
ಮನಸೇ ಮನಸ ಹರಿಸೆ.....
No comments:
Post a Comment
Note: Only a member of this blog may post a comment.