Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Tuesday, January 17, 2012

ತಿಂಗಳಾಯಿತೆ?

  Sandeep T Gowda       Tuesday, January 17, 2012
ಕವನ | ಕೆ.ಎಸ್. ನರಸಿಂಹಸ್ವಾಮಿ | ಮೈಸೂರು ಮಲ್ಲಿಗೆ
ತಿಂಗಳಾಯಿತೆ?
-ಕೆ. ಎಸ್.ನರಸಿಂಹಸ್ವಾಮಿ
(ಕವನ ಸಂಕಲನ - ಮೈಸೂರು ಮಲ್ಲಿಗೆ )

ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ
ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ.
ಇನ್ನೆಂದು ಬರುವಿರೆಂದೆನ್ನ ಕೇಳಿದಳು;
ಇನ್ನೊದು ತಿಂಗಳಿಗೆ ಎಂದು ಹೇಳಿದೆನು.

ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ,
ಕಣ್ಣಿರಲು ತಿಳಿಬಾನ ಕಿರುತಾರೆಯಂತೆ,
ವೇಣಿಯಿರಲು ವಸಂತ ಪುಷ್ಪವನದಂತೆ,
ಮನಸು ಬಾರದು ಎನಗೆ ಅಡಿಯನಿಡೆ ಮುಂದೆ.

ಅಲ್ಲಲ್ಲಿ ನಿಂದವಳ ನೋಡುತಡಿಗಡಿಗೆ
ತೆರಳಿದೆನು ವಿರಹದಲಿ ನಿಲ್ದಾಣದೆಡೆಗೆ-
ದಾರಿಯಲೆ ಕಂಡೊಬ್ಬ ಹಣ್ಣು ಮಾರುವನು
ಹೊರಟು ಹೋದುದು ಬಂಡಿ ಎಂದು ಹೇಳಿದನು.

ಹಿಂತಿರುಗಿ ಬಂದೆನ್ನನೊಂದೆ ಮಾತಿನಲಿ
'ತಿಂಗಳಾಯಿತೆ?' ಎಂದಳೆನ್ನ ಹೊಸಹುಡುಗಿ !

logoblog

Thanks for reading ತಿಂಗಳಾಯಿತೆ?

Previous
« Prev Post

No comments:

Post a Comment

Note: Only a member of this blog may post a comment.