Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Monday, January 23, 2012

ಯಾಕೆ ಬಡಿದಾಡ್ತಿ ತಮ್ಮ ಮಾಯಾ ಮೆಚ್ಚಿ ಸಂಸಾರ ನೆಚ್ಚಿ ||

  Sandeep T Gowda       Monday, January 23, 2012
ಯಾಕೆ ಬಡಿದಾಡ್ತಿ ತಮ್ಮ ಮಾಯಾ ಮೆಚ್ಚಿ ಸಂಸಾರ ನೆಚ್ಚಿ ||
ನೀ ಹೊಗೊದರಿಯೇ ತಮ್ಮ ಕಣ್ಣ ಮುಚ್ಚಿ ಮಣ್ಣ ಮುಚ್ಚಿ ||

ಹೆಂಡ್ರು ಮಕ್ಳಿರುವರು ತಮ್ಮ ಎಲ್ಲಿ ತನಕ ||
ಇದ್ರೆ ತಿಂಬೋ ತನಕ ||
ಸತ್ತಾಗ ಬರುವರು ತಮ್ಮ ಗುಳಿ ತನಕ ||
ಮಣ್ಣು ಮುಚ್ಚೋ ತನಕ ಮಣ್ಣು ಮುಚ್ಚೋ ತನಕ |ಯಾಕೆ|

ಅಣ್ಣ ತಮ್ಮ ಅಕ್ಕ ತಂಗಿ ಎಲ್ಲೀ ತನಕ ||
ಬದುಕೀ ಬೆಳೆಯೋ ತನಕ ||
ಸತ್ತಾಗ ಬರುವರು ತಮ್ಮ ಗುಳಿ ತನಕ ||
ಮಣ್ಣು ಮುಚ್ಚೋ ತನಕ |ಯಾಕೆ|

ಹೆಣ್ಣು ಹೊನ್ನು ಮಣ್ಣು ನಿನ್ನದು ಎಲ್ಲೀ ತನಕ||
ನಿನ್ನ ಕೊರಳಿಗೆ ಕುಣಿಕೆ ಬೀಳೋ ತನಕ||
ನಿನ್ನಾಸೆ ಪ್ರಾಣಪಕ್ಷಿ ಹಾರೋತನಕ ||
ಕಳಚಯ್ಯ ಮಾಯದ ಪೊರೆಯ ಮುಕ್ತಿ ಹೊಂದಾಕ |ಯಾಕೆ |
logoblog

Thanks for reading ಯಾಕೆ ಬಡಿದಾಡ್ತಿ ತಮ್ಮ ಮಾಯಾ ಮೆಚ್ಚಿ ಸಂಸಾರ ನೆಚ್ಚಿ ||

Previous
« Prev Post

No comments:

Post a Comment

Note: Only a member of this blog may post a comment.