Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Saturday, January 21, 2012

ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ

  Sandeep T Gowda       Saturday, January 21, 2012
ಚಿತ್ರ: ಗೀತ
ಹಾಡಿದವರು: ಎಸ್ ಪಿ ಬಾಲು
ನಟರು: ಶಂಕರ್ ನಾಗ್

ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ
ಒಂದು ಹೆಣ್ಣಿನ... ಓ..... ನೊಂದ ವಿರಹ ಗೀತೆ

ಸಂಪಿಗೆ ಒಂದೂರು ಮಲ್ಲಿಗೆ ಒಂದೂರು, ನಡುವಲ್ಲಿ ನದಿಯೊಂದು
ಹಗ್ಗದ ಉಯ್ಯಾಲೆ ತೂಗುವ ಹಾಗೊಂದು, ಸೇತುವೆಯು ಅಲ್ಲೊಂದು
ಈ ಊರ ಚೆಲುವೆ ಆ ಊರ ಚೆಲುವ, ನದಿಯಂಚಲಿ ಓಡಾಡುತ ಎದುರಾದರು ಒಮ್ಮೆ

ಚೆಲುವೆಯ ಕಂಡಾಗ ಚೆಲುವನ ಮನದಲ್ಲಿ ನೂರಾಸೆ ಬಂದಾಗ
ಚೆಲುವೆಯ ಕಣ್ಣಲ್ಲಿ ಚೆಲುವನು ಮನೆಮಾಡಿ ಶಿಲೆಯಂತೆ ನಿಂತಾಗ
ಹೂವಾಗಿ ಮನಸು ನೂರಾರು ಕನಸು ಬೆರಗಾದರು ಒಳವಿನ್ದಲಿ ಒಂದಾದರು ಆಗ........

ಚೆಲುವೆಯ ಮಾವಯ್ಯ ಒಲವಿನ ಕತೆ ಕೇಳಿ ಹುಲಿಯಂತೆ ಎಗರಾಡಿ
ಸೇತುವೆ ಬಳಿ ಬಂದಾಗ ಪ್ರೇಮಿಗಳ ಕಂಡಾಗ ರೋಷದಲಿ ಕೂಗಾಡಿ
ಹಲ್ಲನ್ನು ಮಸೆದ ಸೇತುವೆಯ ಕಡಿದ
ಆ ಜೋಡಿಯ ಕತೆಯಂದಿಗೆ ಕೊನೆಯಾಯಿತು ಹೀಗೆ........
logoblog

Thanks for reading ಕೇಳದೆ ನಿಮಗೀಗ ದೂರದಲ್ಲಿ ಯಾರೋ ಹಾಡು ಹೇಳಿದಂತೆ

Previous
« Prev Post

No comments:

Post a Comment

Note: Only a member of this blog may post a comment.