ಚಲನಚಿತ್ರ: ಮಿಲನ
ಹಾಡಿದವರು: ಸೋನು ನಿಗಮ್, ಶ್ರೇಯ ಗೋಶಲ್
ನಟಿಸಿದವರು: ಪುನೀತ್, ಪಾರ್ವತಿ
ಮಳೆ ನಿಂತು ಹೋದಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ಧ್ವನಿಯೊಂದು ಕಾಡಿದೆ
ಹೇಳುವುದು ಏನೋ ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ.......
ನೋವಿನಲ್ಲಿ ಜೀವ ಜೀವ ಅರಿತ ನಂತರ
ನಲಿವು ಬೇರೆ ಏನಿದೆ ಏಕೀ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
ಒಂದೇ ಸಾರಿ ನೀ ಕೇಳೆಯಾ ಈ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ
ಕೇಳಲಿ ಹೇಗೆ ತಿಳಿಯದಾಗಿದೆ.......
ಕಣ್ಣು ತೆರೆದು ಕಾಣುವ ಕನಸೇ ಜೀವನ
ಸಣ್ಣ ಹಠವ ಮಾಡಿದೆ ಹೃದಯ ಈ ದಿನ
ಎದೆಯ ದೂರವಾಣಿಯ ಕರೆಯ ರಿಂಗಣ
ಕೇಳು ಜೀವವೇ ಏತಕೀ ಕಂಪನ
ಹೃದಯವು ಇಲ್ಲಿ ಕಳೆದುಹೋಗಿದೆ
ಹುಡುಕಲೇ ಬೇಕೆ ತಿಳಿಯದಾಗಿದೆ.......
No comments:
Post a Comment
Note: Only a member of this blog may post a comment.