ಚಿತ್ರ: ಪ್ರೇಮದ ಕಾಣಿಕೆ
ಹಾಡಿದವರು: ರಾಜ್ ಕುಮಾರ್
ನಟರು: ರಾಜ್ ಕುಮಾರ್, ಆರತಿ
ಬಾನಿಗೊಂದು ಎಲ್ಲೆ ಎಲ್ಲಿದೆ ನಿನ್ನಾಸೆಗೆಲ್ಲಿ ಕೊನೆಯಿದೆ
ಏಕೆ ಕನಸು ಕಾಣುವೆ ನಿಧಾನಿಸು ನಿಧಾನಿಸು
ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆ
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನು ಸಾಗದು
ನಾವು ನೆನೆಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ ವಿನೋದವಾಗಲಿ ಅದೇನೇ ಆಗಲಿ ಅವನೇ ಕಾರಣ....
ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೆ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆ ಏತಕೆ ನಿರಾಸೆ ಏತಕೆ ಅದೇನೇ ಬಂದರು ಅವನ ಕಾಣಿಕೆ......
No comments:
Post a Comment
Note: Only a member of this blog may post a comment.