ಉತ್ತರಧ್ರುವದಿಂ ದಕ್ಷಿಣಧ್ರುವಕೂ...
- ದ. ರಾ. ಬೇಂದ್ರೆ
ಉತ್ತರಧ್ರುವದಿಂ ದಕ್ಷಿಣಧ್ರುವಕೂ
ಚುಂಬಕ ಗಾಳಿಯು ಬೀಸುತಿದೆ ||
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಬಿಸಿ ನಗೆಯಲಿ ಮೀಸುತಿದೆ
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ
ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ಧಾರೆಯ ಮಸೆಯಿಸಿತು
ಅಕ್ಷಿನಿಮೀಲನ ಮಾಡದ ನಕ್ಷ-
ತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ
No comments:
Post a Comment
Note: Only a member of this blog may post a comment.