ಯುಗ ಯುಗಾದಿ ಕಳೆದರು...
-ದ.ರಾ. ಬೇಂದ್ರೆ
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸೆತು ಹೊಸೆತು ತರುತಿದೆ ||
ಹೊಂಗೆ ಹೂವ ತೊಂಗಳಲಿ ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ
ಜೀವ ಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವ ಜಾತಕೆ
ಒಂದೇ ಒಂದು ಜನ್ಮದಲ್ಲಿ ಒಂದೇ ಬಾಲ್ಯ ಒಂದೇ ಹರಯ
ನಮಗದಷ್ಟೇ ಏತಕೋ ?
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಾಲ ನವಿನ ಜನನ
ನಮಗೆ ಏಕೆ ಬಾರದೋ?
ಎಲೆ ಸನತ್ಕುಮಾರ ದೇವ ಎಲೆ ಸಾಹಸಿ ಚಿರಂಜೀವ
ನಿನಗೆ ಲೀಲೆ ಸೇರದೋ
No comments:
Post a Comment
Note: Only a member of this blog may post a comment.