ಎಲ್ಲಿರುವೆ ಕಾಣಿಸದೆ...
- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ
ಎಲ್ಲಿರುವೆ ಕಾಣಿಸದೆ ಕರೆವ ಕೊರಳೆ?
ಎಲ್ಲಿರುವೆ ಹೇಳು ನೀ ನಿಜವೆ ನೆರಳೆ? ||
ಮಂಜು ನೇಯುವ ಸಂಜೆ-ಗನಸಿನಂತೆ
ಸಂಜೆ ಬಿಸಿಲಿನ ಮಳೆಯ ಮನಸಿನಂತೆ
ನಿಂತ ಎದೆ ಗೊಳದಲ್ಲಿ ಚಿಂತೆ ಬರೆಯಲು ಯಾರ
ಎಸೆದ ಕೋಗಿಲೆಯ ದನಿ ಹರಳಿನಂತೆ
ನಿನಗೆಂದೆ ನೆಲ ಬಾನು ಕೂಗಿ ಕರೆದೆ
ಹೊಲ ಕಾನು ಬನವೆಲ್ಲ ತಿರುಗಿ ನವೆದೆ
ಓಡಿ ಬಂದೆನು ಇಗೋ ಪರೆವೆ ಇರದೆ
ಓಡಿ ಬರುವಂತೆ ನದಿ ಕಡಲ ಕರೆಗೆ
No comments:
Post a Comment
Note: Only a member of this blog may post a comment.