ಹಕ್ಕಿಯ ಹಾಡಿಗೆ...
- ಕೆ. ಎಸ್. ನರಸಿಂಹಸ್ವಾಮಿ
ಹಕ್ಕಿಯ ಹಾಡಿಗೆ ತಲೆ ದೂಗುವ ಹೂ ನಾನಾಗುವ ಆಸೆ
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ
ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ
ತೋಟದ ಕಂಪಿನ ಉಸಿರಲೇ ತೇಲುವ ಜೇನಾಗುವ ಆಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ
ಸಿಡಿಲನು ಕಾರುವ ಬಿರು ಮಳೆಗಂಜದೆ ಮುನ್ನಡೆಯುವ ಆಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
No comments:
Post a Comment
Note: Only a member of this blog may post a comment.