ಮೊದಲ ದಿನ ಮೌನ...
- ಕೆ. ಎಸ್. ನರಸಿಂಹಸ್ವಾಮಿ
ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ
ಚಿಂತೆ ಬಿಡಿ ಹೂವ ಮುಡಿದಂತೆ ||
ಹತ್ತು ಕಡೆ ಕಣ್ಣು ಸಣ್ಣಗೆ ದೀಪ ಉರಿದಂತೆ
ಜೀವದಲಿ ಜಾತ್ರೆ ಮುಗಿದಂತೆ
ಎರಡನೆಯ ಹಗಲು ಇಳಿ ಮುಖವಿಲ್ಲ ಇಷ್ಟು ನಗು
ಮೂಗುತಿಯ ಮಿಂಚು ಒಳ ಹೊರಗೆ
ನೀರೊಳಗೆ ವೀಣೆ ಮಿಡಿದಂತೆ ಆಡಿದ ಮಾತು
ಬೇಲಿಯಲಿ ಹಾವು ಹರಿದಂತೆ
ಮೂರನೆಯ ಸಂಜೆ ಹೆರಳಿನ ತುಂಬ ದಂಡೆ ಹೂ
ಹೂವಿಗೂ ಜೀವ ಬಂದಂತೆ
ಸಂಜೆಯಲಿ ರಾತ್ರಿ ಇಳಿದಂತೆ ಬಿರು ಬಾನಿಗು
ಹುಣ್ಣಿಮೆಯ ಹಾಲು ಹರಿದಂತೆ
No comments:
Post a Comment
Note: Only a member of this blog may post a comment.