ನೂರು ದೇವರನೆಲ್ಲ...
- ಕುವೆಂಪು
ನೂರು ದೇವರನೆಲ್ಲ ನೂಕಾಚೆ ದೂರ
ಭಾರತಾಂಬೆಯೇ ದೇವಿ ನಮಗಿಂದು ಪೂಜಿಸುವ ಬಾರಾ ಬಾರಾ ||
ಶತಮಾನಗಳು ಬರಿಯ ಜಡ ಶಿಲೆಯ ಪೂಜಿಸಾಯ್ತು
ಹಾವುಗಳಿಗೆ ಹಾಲೆರೆದು ಪೋಷಿಸಾಯ್ತು
ಬಿಸಿಲು ಮಳೆ ಗಾಳಿ ಬೆಂಕಿಯನೆಲ್ಲ ಬೇಡಿಯಾಯ್ತು
ದಾಸರನು ಪೂಜಿಸಿಯೇ ದಾಸ್ಯವಾಯ್ತು
ಗುಡಿಯೊಳಗೆ ಕಣ್ ಮುಚ್ಚಿ ಬೆಚ್ಚಗಿರುವರನೆಲ್ಲ
ಭಕ್ತ ರಕ್ತವ ಹೀರಿ ಕೊಬ್ಬಿಹರನೆಲ್ಲ
ಘಂಟೆ ಜಾಗಟೆಗಳಿನ್ ಬಡಿದು ಕುತ್ತಿಗೆ ಹಿಡಿದು
ಕಡಲಡಿಗೆ ತಳ್ಳಿರೈ ಶಂಖದಿನ್ ನುಡಿದು
ಸತ್ತ ಕಲ್ಗಳ ಮುಂದೆ ಅತ್ತು ಕರೆದುದು ಸಾಕು
ಜೀವದಾತೆಯನಿಂದು ಕೂಗಬೇಕು
ಶಿಲೆಯ ಮೂರ್ತಿಗೆ ನೇಯ್ದ ಕಳೆಯ ಬಲೆಯನು ಒಯ್ದು
ಚಳಿಯು ಮಳೆಯಲಿ ನವೆವ ತಾಯ್ಗೆ ಹಾಕು
No comments:
Post a Comment
Note: Only a member of this blog may post a comment.