Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Friday, January 18, 2013

ಅಮ್ಮ ನಿನ್ನ ಎದೆಯಾಳದಲ್ಲಿ...

  Sandeep T Gowda       Friday, January 18, 2013

ಅಮ್ಮ ನಿನ್ನ ಎದೆಯಾಳದಲ್ಲಿ...

- ಬಿ.ಆರ್. ಲಕ್ಷ್ಮಣ್ ರಾವ್

ಅಮ್ಮ, ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು ||
ಕಡಿಯಲೋಲ್ಲೆ ನೀ ಕರುಳ ಬಳ್ಳಿ ಒಲವೂಡುತಿರುವ ತಾಯೆ
ಬಿಡದ ಭುವಿಯಾ ಮಾಯೆ

ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳ ನೋಟ ಕಲಿವೆ, ನಾ ಕಲಿವೆ ಊರ್ಧ್ವ ಗಮನ
ಓ! ಅಗಾಧ ಗಗನ

ಮೇಲೆ ಹಾರಿ ನಿನ್ನ ಸೆಳೆತ ಮೀರಿ ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು ಬಂದೇ ಬರುವೆನು ಮತ್ತೇ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ
logoblog

Thanks for reading ಅಮ್ಮ ನಿನ್ನ ಎದೆಯಾಳದಲ್ಲಿ...

Previous
« Prev Post

No comments:

Post a Comment

Note: Only a member of this blog may post a comment.