Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Monday, August 28, 2017

ಚೆಲ್ವಿ ಚೆಲ್ವಿ ಎಂದು ಅತಿಯಾಸೆ ಪಡಬೇಡ (Kannada Janapada song lyrics)

  Sandeep T Gowda       Monday, August 28, 2017
ಚೆಲ್ವಿ ಚೆಲ್ವಿ ಎಂದು ಅತಿಯಾಸೆ ಪಡಬೇಡ
ಚೆಲ್ವು ಇದ್ದರೇನು ಗುಣವಿಲ್ಲ
ಹೊಳೆನೀರು ತಿಳಿ ಇದ್ದರೇನು ರುಚಿ ಇಲ್ಲಾ


ಕಪ್ಪು ಹೆಂಡತಿಯೆಂದು ಕಳವಳ ಪಡಬೇಡ
ನೇರಳೆ ಹಣ್ಣು ಬಲು ಕಪ್ಪು
ಇದ್ದರೂ ತಿಂದು ನೋಡಿದರೆ ರುಚಿ ಬಹಳ


ಕೆಂಪು ಹೆಂಡತಿಯೆಂದು ಸಂತೋಷ ಪಡಬೇಡ
ಹತ್ತಿಯ ಹಣ್ಣು ಬಲು ಕೆಂಪು
ಇದ್ದರೂ ಒಡೆದು ನೋಡಿದರೆ ಹುಳು ಬಹಳಾ


ಬಂಗಾರ ಬಳಿತೊಟ್ಟು ಬಡಿವಾರ ಬ್ಯಾಡ
ಬಂಗಾರ ನಿನಗೆ ಸ್ಥಿರವಲ್ಲ
ಮಧ್ಯಾಹ್ನ ಸಂಜೆಯಾಗುವುದು ತರವಲ್ಲ

logoblog

Thanks for reading ಚೆಲ್ವಿ ಚೆಲ್ವಿ ಎಂದು ಅತಿಯಾಸೆ ಪಡಬೇಡ (Kannada Janapada song lyrics)

Previous
« Prev Post

No comments:

Post a Comment

Note: Only a member of this blog may post a comment.