ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ
ಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು
ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ
ಶ್ರೀ ಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ
ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿ
ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಕೆಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ
--- ಪುರಂದರ ದಾಸರು
No comments:
Post a Comment
Note: Only a member of this blog may post a comment.