Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Saturday, September 9, 2017

ರತ್ನನ್ ಪರ್ಪಂಚ - ರತ್ನನ ಪದಗಳು - Rathnan Padagalu

  Sandeep T Gowda       Saturday, September 9, 2017

ಯೇಳ್ಕೊಳ್ಳಾಕ್ ಒಂದ್ ಊರು
ತಲೇಮೇಗ್ ಒಂದ್ ಸೂರು
ಮಲಗಾಕೆ ಬೂಮ್ತಾಯಿ ಮಂಚ;
ಕೈ ಯಿಡದೋಳ್ ಪುಟ್ನಂಜಿ
ನೆಗನೆಗತ ಉಪ್ಗಂಜಿ
ಕೊಟ್ರಾಯ್ತು ರತ್ನನ್ ಪರ್ಪಂಚ!

ಅಗಲೆಲ್ಲ ಬೆವರ್ ಅರ್ಸಿ
ತಂದದ್ರಲ್ಲ್ ಒಸಿ ಮುರ್ಸಿ
ಸಂಜೇಲಿ ವುಳಿ ಯೆಂಡ ಕೊಂಚ
ಯೀರ್ತ ಮೈ ಝುಂ ಅಂದ್ರೆ
ವಾಸ್ನೆ ಘಂ ಘಂ ಅಂದ್ರೆ
ತುಭೋಯ್ತು ರತ್ನನ್ ಪರ್ಪಂಚ!

ಏನೋ ಕುಸಿಯಾದಾಗ
ಮತ್ತ್ ಎಚ್ಚಿ ಓದಾಗ
ಅಂಗೇನೆ ಪರಪಂಚದ್ ಅಂಚ
ದಾಟ್ಕಂಡಿ ಆರಾಡ್ತ
ಕನ್ನಡದಲ್ ಪದವಾಡ್ತ
ಇಗ್ಗೋದು ರತ್ನನ್ ಪರ್ಪಂಚ!

ದುಕ್ಕಿಲ್ಲ ದಾಲಿಲ್ಲ
ನಮಗ್ ಅದರಾಗ್ ಪಾಲಿಲ್ಲ
ನಾವ್ ಕಂಡಿಲ್ಲ್ ಆ ತಂಚ ವಂಚ;
ನಮ್ಮಸ್ಟಕ್ ನಾವಾಗಿ
ಇದ್ದಿದ್ರಲ್ಲ್ ಆಯಾಗಿ
ಬಾಳೋದು ರತ್ನನ್ ಪರ್ಪಂಚ!

'ಬಡತನ ಗಿಡತನ
ಏನಿದ್ರೇನ್ ? ನಡೆತೇನ
ಚೆಂದಾಗ್ ಇಟ್ಕೊಳ್ಳಾದೆ ಅಚ್ಛ!' -
ಅಂದ್ಕೊಂಡಿ ಸುಕವಾಗಿ
ಕಸ್ಟಕ್ ನೆಗಮೊಕವಾಗಿ
ನೆಗೆಯೋದೆ ರತ್ನನ್ ಪರ್ಪಂಚ!

ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಚ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಚೊಂಡ್ ಯೇಳ್ದಂಗೆ
ಕುಣಿಯಾದೆ ರತ್ನನ್ ಪರ್ಪಂಚ!

--ಜಿ ಪಿ ರಾಜರತ್ನಂ

logoblog

Thanks for reading ರತ್ನನ್ ಪರ್ಪಂಚ - ರತ್ನನ ಪದಗಳು - Rathnan Padagalu

Previous
« Prev Post

No comments:

Post a Comment

Note: Only a member of this blog may post a comment.