Kannada Song lyrics - ಕನ್ನಡ ಸಾಹಿತ್ಯ - ಕನ್ನಡ ಹಾಡುಗಳ ಲಿರಿಕ್ಸ್ -

ಕನ್ನಡ ಚಲನಚಿತ್ರ ಗೀತೆಗಳ , ಕವನಗಳ , ಜನಪದ ಗೀತೆಗಳ , ವಚನಗಳ , ದಾಸರ ಪದಗಳ , ಭಾವಗೀತೆಗಳ ಸಂಗ್ರಹ ...

Saturday, September 9, 2017

ಮೊಟ್ಮೊದಲು - ರತ್ನನ ಪದಗಳು - Rathnan Padagalu

  Sandeep T Gowda       Saturday, September 9, 2017

ನನಗೂನೆ ಯೆಂಡಕ್ಕು ಬಲ್ ಬಲೆ ದೋಸ್ತಿ.
ಕುಡದ್ ಬುಟ್ಟಾಗ್ ಆಡೋದು ನಂಗ್ ಪೂರ ಜಾಸ್ತಿ.
ನಂಗ್ ಎಸರು ಯೇಳ್ತಾರೆ - ರ್ರರ್ರರ್ರರ್ರತ್ನ.
ನಾನ್ ಆಡೋ ಪದಗೋಳು ಯೆಂಡದ್ ಪ್ರಯತ್ನ.

ಮಾಬಾರ್‍ತ ಬರೆಯಾಕೆ ಯಾಸಂಗ್ ಇನಾಯ್ಕ
ಸಿಕ್ದಂಗೆ ನಂಗ್ ಒಬ್ಬ ಬೇವಾರ್ಸಿನಾಯ್ಕ
ಸಿಕ್ಕೋನೆ, ನನ್ ಆಡ್ನ ಕೂಡಿಸ್ದ ಬರ್ದು!
ಏನ್ ಐತೊ ಯಾರ್ ಬಲ್ರು ಔಂಗ್ ಇರೊ ದರ್ದು!

'ಬರಕೊಂಡ್ರೆ ಬರಕೊಂಡ್ ಓಗ್, ನಿಂಗೂನೆ ಐಲು;
ಆದಸ್ಟೂ ಮಾಡಾನೆ ಸಾಯ ನಂಕೈಲು'
ಅಂದ್ಕಂಡ್ ಔನ್ ಬರದಿದ್ನ ಅಚ್ಗ್ ಆಕೋಕ್ ಒಪ್ಪಿ
ಕಳಿಸಿವ್ನಿ. ಬೈದೀರ ನನಗೇನ್ರ ತಪ್ಪಿ!

ಅಕ್ಸಾರ ಗಿಕ್ಸಾರ ನನಗೇನೂ ಬರ್‍ದು.
(ದೊಡ್ ಚಾಕ್ರಿ ಬೇಕಂದ್ರೆ ಓದೆ ಬೇಕು ದರ್ದು!)
ಪದಗೋಳು ಚಂದ್ ಇದ್ರೆ ಯೆಂಡಕ್ ಸಿಪಾರ್ಸಿ!
ಚಂದಾಗ್ ಇಲ್ದಿದ್ರನಕ ತಪ್ಗೆ ಬೇವಾರ್ಸಿ!

- ಜಿ ಪಿ ರಾಜರತ್ನಂ
logoblog

Thanks for reading ಮೊಟ್ಮೊದಲು - ರತ್ನನ ಪದಗಳು - Rathnan Padagalu

Previous
« Prev Post

No comments:

Post a Comment

Note: Only a member of this blog may post a comment.